ಹಾವೇರಿ ಜಿಲ್ಲೆಯಾದ್ಯಂತ 73 ಗಣರಾಜ್ಯೋತ್ಸವವನ್ನ ಸಡಗರ ಸಂಭ್ರಮದಿಂದ ಆಚರಿಸಲಾಗುತ್ತಿದೆ. ಹಾವೇರಿ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಅರಿಬೇಲ್ ಶಿವರಾಮ ಹೆಬ್ಬಾರ್ ದ್ವಜಾರೋಹಣ ನೆರವೇರಿಸಿದರು. ಈ ಸಂದರ್ಭದಲ್ಲಿ ಮಹಾತ್ಮಾ ಗಾಂಧಿಜಿ ಮತ್ತು ಬಾಬಾ ಸಾಹೇಬ ಅಂಬೇಡ್ಕರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಲಾಯಿತು.
ನಂತರ ತೆರೆದ ವಾಹನದಲ್ಲಿ ಕಾರ್ಮಿಕ ಸಚಿವ ಶಿವರಾಮ್ ಹೆಬ್ಬಾರ್ ಪರೇಡ್ ವೀಕ್ಷಣೆ ನಡೆಸಿದರು. ನಂತರ ನಡೆದ ಪಥಸಂಚಲನ ಆಕರ್ಷಕವಾಗಿತ್ತು. ವಿವಿಧ ಪ್ಲಟೋನ್‌ಗಳು ಸಚಿವರಿಗೆ ಗೌರವ ವಂದನೆ ಸಲ್ಲಿಸಿದವು. ಇನ್ನು ಇದೇ ಮೊದಲ ಬಾರಿಗೆ ಪೊಲೀಸ್ ಆದೇಶಗಳನ್ನು ಕನ್ನಡದಲ್ಲಿ ಬಳಿಸಿದ್ದು ಗಮನ ಸೆಳೆಯಿತು.
ನಂತರ ಮಾತನಾಡಿದ ಸಚಿವ ಶಿವರಾಮ್ ಹೆಬ್ಬಾರ್, ಆರ್ಥಿಕ ನ್ಯಾಯ ಮತ್ತು ಸಾಮಾಜಿಕ ನ್ಯಾಯ ನೀಡುವದು ನಮ್ಮ ಸಂವಿಧಾನದ ಗುರಿಯಾಗಿದೆ ಎಂದು ತಿಳಿಸಿದರು. ಹಾವೇರಿ ಜಿಲ್ಲೆಗೆ ಉಸ್ತುವಾರಿ ಸಚಿವರಾಗಿದ್ದಕ್ಕೆ ಸಂತಸ ವ್ಯಕ್ತಪಡಿಸಿದರು.