ಬೆಂಗಳೂರು ದಕ್ಷಿಣದಲ್ಲಿ ಐಟಿ ರೇಡ್‌ : ಅಭ್ಯರ್ಥಿಗಳಿಗೆ ಶಾಕ್‌..!


 ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಆದಾಯ ತೆರಿಗೆ ಇಲಾಖೆ ಮತ್ತು ಚುನಾವಣಾ ಆಯೋಗ, ಹಣ ಹಾಗೂ ಅಕ್ರಮ ವಹಿವಾಟಿನ ಮೇಲೆ ಹದ್ದಿನ ಕಣ್ಣು ಇಟ್ಟಿವೆ. ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಲ್ಲಿ 16 ಕಡೆ ಶೋಧ ನಡೆಸಿದ್ದು, ಕೆಜಿಗಟ್ಟಲೆ ಚಿನ್ನ ಮತ್ತು ಹಣ ಪತ್ತೆಯಾಗಿದೆ.

ಶಂಕರಪುರದಲ್ಲಿ 3 ಕೋಟಿಗೂ ಅಧಿಕ ಮೌಲ್ಯದ 4 ಕೆಜಿ 400 ಗ್ರಾಂ ಚಿನ್ನಾಭರಣ ಪತ್ತೆಯಾಗಿದೆ. ಶಾರದದೇವಿ ರಸ್ತೆಯಲ್ಲಿ 3 ಕೋಟಿ 39 ಲಕ್ಷ ಮೌಲ್ಯದ 4 ಕೆಜಿ 800 ಗ್ರಾಂ, ಮರ್ಕೈಂಟಲ್‌ ಬ್ಯಾಂಕ್‌ ಬಳಿ 2 ಕೋಟಿ 13 ಲಕ್ಷ ಮೌಲ್ಯದ 3 ಕೆಜಿ 400 ಗ್ರಾಂ, ಜಯನಗರ 3ನೇ ಬ್ಲಾಕ್‌ ನಲ್ಲಿ 5 ಕೋಟಿ 33 ಲಕ್ಷ ಮೌಲ್ಯದ 7 ಕೆಜಿ 598 ಗ್ರಾಂ, ಸಾರಸ್ವತ್‌ ಬ್ಯಾಂಕ್‌, ಚಾಮರಾಜಪೇಟೆಯಲ್ಲಿ 84 ಲಕ್ಷ ಮೌಲ್ಯದ 1 ಕೆಜಿ 200 ಗ್ರಾಂ ಚಿನ್ನ ಪತ್ತೆಯಾಗಿದೆ.

ಬಸವನಗುಡಿ ಅಂಚೆ ಕಚೇರಿ ಬಳಿ 3 ಲಕ್ಷ 34 ಸಾವಿರ ಮೌಲ್ಯದ 6.38 ಕ್ಯಾರೆಟ್‌ ವಜ್ರ, ಮಾತಾ ಶಾರದಾ ದೇವಿ ರಸ್ತೆಯಲ್ಲಿ 3 ಲಕ್ಷದ 14 ಸಾವಿರ ಮೌಲ್ಯದ 5.99 ಕ್ಯಾರೆಟ್‌ ವಜ್ರ, ಜಯನಗರದಲ್ಲಿ 6 ಕೋಟಿ 40 ಲಕ್ಷ ಮೌಲ್ಯದ 202.83 ಕ್ಯಾರೆಟ್‌ ವಜ್ರ ಪತ್ತೆಯಾಗಿವೆ.

Post a Comment

Previous Post Next Post

Contact Form